ಚೈತ್ರಾ ಕುಂದಾಪುರ ಮಾಡಿರೋ ಮೋಸ ಅಷ್ಟಿಷ್ಟಲ್ಲಾ.. ಕಬಾಬ್‌ ಮಾರೋ ಹುಡುಗನನ್ನ ಬಳಸಿಕೊಂಡಿದ್ದ ಚೈತ್ರಾ ಪೋಲೀಸರ ಮುಂದೆ ಸತ್ಯ ಹೊರ ಹಾಕಿದ್ದಾರೆ….

0 views

ಚೈತ್ರಾ ಕುಂದಾಪುರ.. ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಫೇಮಸ್ ಆಗಿದ್ದ ಚೈತ್ರಾ ಕುಂದಾಪುರ ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿದ್ದು ಎಲ್ಲರಿಗೂ ತಿಳಿದೇ ಇದೆ.. ಸಾಕಷ್ಟು ಕಾರ್ಯಕ್ರಮಗಳಲ್ಲಿ ಬಾಷಣ ಗಳನ್ನು ಮಾಡಿ ಆ ಬಾಷಣಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಕೂಡ ಆಗಿದ್ದವು.. ಚಿಕ್ಕ ವಯಸ್ಸಿನ ಹುಡುಗಿ ಧರ್ಮದ ಬಗ್ಗೆ ಹಾಗೂ ದೇಶಾಭಿಮಾನದ ಬಗ್ಗೆ ಮಾಡುವ ಬಾಷಣ ಕೇಳಿ ಜನರಿಗೂ ಬಹಳ ಇಷ್ಟವಾಗುತಿತ್ತು.. ಆದರೆ ಇದೀಗ ತಾನು ಫೇಮಸ್‌ ಆಗಿದ್ದನ್ನೇ ಬಳಸಿಕೊಂಡು ಬಿಜೆಪಿ ಪಕ್ಷದಲ್ಲಿ ಎಂ ಲ್‌ ಎ ಟಿಕೇಟ್‌ ಕೊಡಿಸೋದಾಗಿ ವ್ಯಕ್ತಿಯೊಬ್ಬರಿಗೆ ಏಳು ಕೋಟಿ ರೂಪಾಯಿ ಪಂಗನಾಮ ಹಾಕಿರುವ ಘಟನೆ ಬೆಳಕಿಗೆ ಬಂದಿದ್ದು ಇದೀಗ ಬೆಂಗಳೂರು ಪೋಲೀಸರು ಚೈತ್ರಾ ಕುಂದಾಪುರ ಳನ್ನುಬಂಧಿಸಿದ್ದಾರೆ.. ಅಷ್ಟೇ ಅಲ್ಲ.. ಈ ರೀತಿ ಹಣ ಮೋಸ ಮಾಡಲು ಹೋದಾಗ ಆ ವ್ಯಕ್ತಿಯ ಮುಂದೆ ಕಬಾಬ್‌ ಮಾರುವವರನ್ನು ಹಾಗೂ ಸಲೂನ್‌ ನಲ್ಲಿ ಕೆಲಸ ಮಾಡುವ ಹುಡುಗರನ್ನು ತೋರಿಸಿ ಇವರೆಲ್ಲಾ ಬಿಜೆಪಿ ಮುಖಂಡರು.. ದೆಹಲಿಯ ನಾಯಕರ ಜೊತೆ ಸಂಪರ್ಕದಲ್ಲಿದ್ದಾರೆ..

ಇವರು ಖಂಡಿತ ನಿಮಗೆ ಟಿಕೇಟ್‌ ನೀಡುತ್ತಾರೆಎಂದು ನಂಬಿಸಿದ್ದಾರೆ.. ಕೊನೆಗೆ ಐತ್ರಾಳ ಮಾತನ್ನು ನಂಬಿದ ಆ ವ್ಯಕ್ತಿ ಕೋಟಿ ಕೋಟಿ ಹಣವನ್ನು ಚೈತ್ರಾಳಿಗೆ ನೀಡಿದ್ದಾನೆ.. ಆದರೆ ಇತ್ತ ವಿಧಾನ ಸಭಾ ಚುನಾವಣೆಯೂ ಆಯಿತು ಸರ್ಕಾರವೂ ಬಂತು.. ಆದರೆ ಆ ವ್ಯಕತಿ ಮಾತ್ರ ಹಣ ಕಳೆದುಕೊಂಡು ಸುಮ್ಮನಾಗಲಿಲ್ಲ.. ಪೋಲೀಸ್‌ ಠಾಣೆ ಮೆಟ್ಟಿಲೇರಿದ್ದು ಇದೀಗ ಚೈತ್ರಾ ಕುಂದಾಪುರ ಪೋಲೀಸರ ಅತಿಥಿಯಾಗಿದ್ದಾರೆ.. ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ಕೋಟ್ಯಾಂತರ ರುಪಾಯಿ ವಂಚಿಸಿರುವ ಆರೋಪದ ಮೇರೆಗೆ ಬೆಂಗಳೂರಿನ ಸಿಸಿಬಿ ಪೊಲೀಸರು ಚೈತ್ರಾ ಕುಂದಾಪುರ ರನ್ನು ಸಿಸಿಬಿ ಬೆಂಗಳೂರು ವಿಭಾಗದ ಪೊಲೀಸರು ಮಂಗಳವಾರ ರಾತ್ರಿ ಉಡುಪಿ ಕೃಷ್ಣ ಮಠದಿಂದ ವಶಕ್ಕೆ ಪಡೆದಿದ್ದಾರೆ. ಚೈತ್ರಾ ಕುಂದಾಪುರ ಸೇರಿದಂತೆ 8 ಮಂದಿಯ ವಿರುದ್ಧ ಉದ್ಯಮಿ ಗೋವಿಂದ ಪೂಜಾರಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಹಿಂದೂ ಸಂಘಟನೆಯ ನಾಯಕಿ, ಚೈತ್ರಾ ಕುಂದಾಪುರ ರನ್ನು ಸಿಸಿಬಿ ಬೆಂಗಳೂರು ವಿಭಾಗದ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಚೈತ್ರಾ ಕುಂದಾಪುರ ಅವರು ಗೋವಿಂದಬಾಬು ಪೂಜಾರಿ ಎಂಬುವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಕೊಡಿಸುವುದಾಗಿ ಹೇಳಿದ್ದರು. ಇದನ್ನು ನಂಬಿದ ಗೋವಿಂದಬಾಬು ಪೂಜಾರಿಯವರು ಚೈತ್ರಾ ಕುಂದಾಪುರ ಹೇಳಿದಂತೆ ಆಗಾಗ ಬೆಂಗಳೂರಿಗೆ ಬರುತ್ತಿದ್ದರು. ಇಲ್ಲಿ ಚೈತ್ರಾ ಕುಂದಾಪುರ ಕೆಲವರನ್ನು ತೋರಿಸಿ ಇವರಿಗೆ ಹೈಕಮಾಂಡ್​​ ನಾಯಕರ ಜೊತೆ ನಿಕಟ ಸಂಪರ್ಕವಿದ್ದು, ಇವರು ಹೇಳಿದರೆ ಟಿಕೆಟ್ ಕೊಡಿಸುತ್ತಾರೆ ಎಂದು ಮಾತಿನ ಮೂಲಕ ಮರುಳು ಮಾಡಿದ್ದರು. ಇದನ್ನು ನಂಬಿದ ಗೋವಿಂದಬಾಬು ಪೂಜಾರಿ ಅವರು ಟಿಕೆಟ್ ಸಿಗತ್ತೆ ಅನ್ನುವ ಆಸೆಗೆ ಕೇಳಿದಷ್ಟು ಹಣ ಕೊಡುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.. ಗೋವಿಂದಬಾಬು ಅವರ ಬಳಿಯಿಂದ ಚೈತ್ರಾ ಕುಂದಾಪುರ ಒಟ್ಟು 4 ಕೋಟಿ ರೂಪಾಯಿ ಹಣ ಪಡೆದಿದ್ದರು. ಆದರೆ ಗೋವಿಂದಬಾಬು ಪೂಜಾರಿ ಅವರಿಗೆ ಟಿಕೆಟ್​ ಸಿಗಲಿಲ್ಲ. ಬಳಿಕ ಗೋವಿಂದಬಾಬು ಕೊಟ್ಟ ಹಣವನ್ನು ವಾಪಸ್ಸು ಕೇಳಿದ್ದಾರೆ. ಆದರೆ ಚೈತ್ರಾ ಕುಂದಾಪುರ ಹಣ ನೀಡದೇ ವಂಚಿಸಿದ್ದಾರೆ ಎಂದು ಗೋವಿಂದಬಾಬು ಪೂಜಾರಿ ಅವರು ದೂರು ದಾಖಲಿಸಿದ್ದಾರೆ.

ಬೈಂದೂರುನ ಸಮಾಜ ಸೇವಕರೊಬ್ಬರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಆಮಿಷವೊಡ್ಡಿ 7 ಕೋಟಿ ರುಪಾಯಿ ವಂಚಿಸಿರುವ ಆರೋಪದ ಮೇರೆಗೆ ಚೈತ್ರಾರನ್ನು ಮಂಗಳವಾರ ರಾತ್ರಿ ವಶಕ್ಕೆ ಪಡೆದಿದ್ದಾರೆ. ಕೆಲ ಸಮಯದಿಂದ ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಬೆಂಗಳೂರಿನ ಸಿಸಿಬಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದು ಇಬ್ಬರು ಆರೋಪಿಗಳನ್ನು ಮಂಗಳವಾರ ವಶಕ್ಕೆ ಪಡೆದಿದ್ದಾರೆ. ಸದ್ಯ ಪ್ರಕರಣದಲ್ಲಿ ಚೈತ್ರಾ ಜೊತೆಗೆ ಪ್ರಸಾದ್, ಗಗನ್ ಕಡೂರು, ಪ್ರಜ್ವಲ್ ಶೆಟ್ಟಿ ಆರ್ ಎಸ್ ಧನರಾಜ್, ರಮೇಶ್, ಶ್ರೀಕಾಂತ್ ನನ್ನೂ ಕೂಡಾ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ… ಚೈತ್ರಾ ಸಹಿತ 8 ಮಂದಿಯ ವಿರುದ್ಧ ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಬೆಂಗಳೂರಿನ ಬಂಡೇಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಚೈತ್ರಾ ಹಾಗೂ ಅವರ ಸಂಗಡಿಗರು ಕೇಂದ್ರದ ನಾಯಕರು ಹಾಗೂ ಆರೆಸ್ಸೆಸ್ ಮುಖಂಡರ ಹೆಸರಲ್ಲಿ ಈ ಮೋಸ ಮಾಡಿದ್ದಾರೆ. ಚೈತ್ರ ಹಾಗೂ ನಾಲ್ಕೈದು ಜನರ ತಂಡ ಆರ್ ಎಸ್ ಎಸ್ ಪ್ರಮುಖರು ಎಂದು ನಕಲಿ ನಾಯಕರ ತಂಡವನ್ನೂ ಸೃಷ್ಟಿಮಾಡಿದ್ದರು ಎನ್ನಲಾಗಿದೆ. ಈಗ ಚೈತ್ರಾ ಕುಂದಾಪುರ ಹಾಗೂ ಶ್ರೀಕಾಂತ್ ನಾಯಕ್ ಪೆಲತ್ತೂರು ಪೊಲೀಸರ ಅತಿಥಿಯಾಗಿದ್ದಾರೆ. ಈ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಗಗನ್ ಕಡೂರು ಹಾಗೂ ಪ್ರಸಾದ್ ರನ್ನು ವಶಕ್ಕೆ ಪಡೆಯಲಾಗಿತ್ತು. ಈಗ ಚೈತ್ರಾ ಕುಂದಾಪುರ ಕೂಡ ಪೋಲೀಸರಿಗೆ ಅತಿಥಿಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಟ್ರೋಲ್‌ ಕೂಡ ಆಗುತ್ತಿದೆ..

ಶ್ರೀ ಪಂಚಮುಖಿ ಜ್ಯೋತಿಷ್ಯಂ.. ಪಂಡಿತ್ ಶ್ರೀ ಗಣೇಶ್ ಕುಮಾರ್.. ಎಲ್ಲಾ ಕಷ್ಟಗಳಿಗೂ ಫೊನಿನ ಮೂಲಕ ಪರಿಹಾರ.. 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಸಮಸ್ಯೆ ಏನೇ ಇರಲಿ, ಎಷ್ಟೇ ಕಷ್ಟವಾಗಿರಲಿ 600 ವರ್ಷ ಹಳೆಯ 108 ಜ್ಯೋತಿಷ್ಯ ತಂತ್ರಗಳಿಂದ ವಶೀಕರಣ, ದಾಂಪತ್ಯ, ಪ್ರೇಮ ವಿಚಾರ, ಹಣಕಾಸು ಗಳಿಕೆ ಅತಿ ಶೀಘ್ರದಲ್ಲಿ ಮಹೋನ್ನತ ಪರಿಹಾರಗಳು.. ನಿಮ್ಮ ಎಲ್ಲಾ ಕಠಿಣ ಸಮಸ್ಯೆಗಳಿಗೆ ಕೇರಳ ಕಲ್ಕತ್ತಾದ ಸಾವಿರಾರು ವರ್ಷಗಳ ಪ್ರಾಚೀನ ನಾಡಿ ಗ್ರಂಥ ಆಧಾರದಿಂದ ನಿಮ್ಮೆಲ್ಲಾ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ.. ಫೋನ್ ಅಥವಾ ವಾಟ್ಸಪ್ ಮಾಡಿ 9880444450.