ಎರಡೂ ಕ್ಷೇತ್ರದಲ್ಲಿ ಸೋತದ್ದಕ್ಕೆ ಯಾರು ಕಾರಣ? ಕುಸುಮಾ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸಿದ್ದರಾಮಯ್ಯನವರು..‌

0 views

ವಿಧಾನಸಭಾ ಉಪಚುನಾವಣೆಯ ಫಲಿತಾಂಶ ರಾಜ್ಯ ಕಾಂಗ್ರೆಸ್ ನಾಯಕರಿಗೆ ನುಂಗಲಾರದ ತುತ್ತಾಗಿದೆ.. ಎರಡೂ ಕ್ಷೇತ್ರದಲ್ಲಿ ಸೋಲು ಕಂಡಿದ್ದು ಇದೀಗ ಮುಖಂಡರುಗಳು ಈ ಬಗ್ಗೆ ಪ್ರತಿಕ್ರಿಯೆ ನೀಡುತ್ತಿದ್ದಾರೆ.. ಹೌದು ಅದರಲ್ಲೂ ಕಳೆದ ಬಾರಿ ರಾಜರಾಜೇಶ್ವರಿ ನಗರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆದ್ದಿದ್ದು ಇದೀಗ ಈ ಚುನಾವಣೆಯಲ್ಲಿ ಕುಸುಮಾ ಅವರು ದೊಡ್ಡ ಮತಗಳ ಅಂತರದಲ್ಲಿ ಸೋಲು ಕಂಡಿದ್ದು ತೀವ್ರ ನಿರಾಸೆಯನ್ನುಂಟು ಮಾಡಿದೆ.. ಇದೀಗ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಸಿದ್ದರಾಮಯ್ಯನವರು ಹೇಳಿಕೆ ನೀಡಿದ್ದಾರೆ.. ಹೌದು ಆರ್ ಆರ್ ನಗರದಲ್ಲಿ ಅಭ್ಯರ್ಥಿ ಆಯ್ಕೆಯನ್ನು ನಾವು ಮಾಡಿದ್ದು ತಡವಾಯ್ತು ಎಂದಿದ್ದಾರೆ..

ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರದ ಸೋಲನ್ನು ನಾವು ವಿನೀತರಾಗಿ ಒಪ್ಪಿಕೊಂಡಿದ್ದೇವೆ. ಆದರೆ ಇದು ಪ್ರಜಾಪ್ರಭುತ್ವದ ಸೋಲು. ಅಕ್ರಮ ಗಳಿಕೆಯ ಹಣ ಮತ್ತು ಆಡಳಿತ ಯಂತ್ರದ ದುರುಪಯೋಗಕ್ಕೆ ಸಿಕ್ಕಿರುವ ಗೆಲುವು ಎನ್ನುವುದು ವಿಷಾದದ ಸಂಗತಿ.

ಸಾಮಾನ್ಯವಾಗಿ ಉಪಚುನಾವಣೆಗಳಲ್ಲಿ ಅಧಿಕಾರರೂಢ ಪಕ್ಷದ ಅಭ್ಯರ್ಥಿಗಳು ಗೆಲ್ಲುತ್ತಾರೆ. ಆಡಳಿತ ಪಕ್ಷದ ಶಾಸಕರಿದ್ದರೆ ತಮ್ಮ ಕ್ಷೇತ್ರಕ್ಕೆ ಅನುಕೂಲವಾಗುತ್ತದೆ ಎಂಬ ಅಭಿಪ್ರಾಯ ಜನರಲ್ಲಿರುತ್ತದೆ. ಇದೇ ಫಲಿತಾಂಶ ಸಾಮಾನ್ಯ ಚುನಾವಣೆಯಲ್ಲಿ ನಿರೀಕ್ಷಿಸಲಾಗದು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶವನ್ನು ಸ್ವೀಕರಿಸಲೇಬೆಕು. ನಾವೂ ಒಪ್ಪಿಕೊಂಡಿದ್ದೇವೆ. ಇದರಿಂದ ಪಕ್ಷದ ಕಾರ್ಯಕರ್ತರು ಕಂಗೆಡಬೇಕಾಗಿಲ್ಲ. ಇದರಿಂದ ಯಾವ ಪಕ್ಷವೂ ಬಲಶಾಲಿಯಾಗುವುದಿಲ್ಲ, ಯಾವ ಪಕ್ಷವೂ ಬಲಹೀನವಾಗುವುದೂ ಇಲ್ಲ. ಇದು ಸಮಗ್ರ ರಾಜ್ಯದ ಜನಾಭಿಪ್ರಾಯ ಅಲ್ಲ, ಇದು ಎರಡು ಸ್ಥಾನಗಳಿಗೆ ನಡೆದ ಚುನಾವಣೆ.

ನಾನು ಮುಖ್ಯಮಂತ್ರಿಯಾಗಿದ್ದಾಗ ಜನರಿಗೆ ಒಳ್ಳೆಯದಾಗಲಿ, ನಮ್ಮ ಶಾಸಕನೂ ರಾಜಕೀಯವಾಗಿ ಜನಪ್ರಿಯನಾಗಲಿ ಎಂದು ಆರ್.ಆರ್.ನಗರಕ್ಕೆ ಸುಮಾರು ರೂ.2000 ಕೋಟಿ ಕಾಮಗಾರಿಯನ್ನು ಮಂಜೂರು ಮಾಡಿದ್ದೆ. ಅದರ ಫಲ ನಮ್ಮ ಪಕ್ಷಕ್ಕೆ ಸಿಗಲಿಲ್ಲ, ಅವರಿಗೆ ಸಿಕ್ಕಿದೆ.

ಮುನಿರತ್ನ ಅವರು ಪಕ್ಷಾಂತರ ಮಾಡಿದ ದಿನದಿಂದ ಚುನಾವಣಾ ತಯಾರಿ ಪ್ರಾರಂಭಿಸಿದ್ದರು. ನಾವು ನಮ್ಮ ಅಭ್ಯರ್ಥಿಯ ಆಯ್ಕೆಯನ್ನು ಸ್ವಲ್ಪ ತಡವಾಗಿ ಮಾಡಿದೆವು, ಇದರಿಂದಾಗಿ ಪ್ರಚಾರ ವಿಳಂಬವಾಗಿ ಪ್ರಾರಂಭಿಸಬೇಕಾಯಿತು. ಸೋಲಿಗೆ ಇದೂ ಒಂದು ಕಾರಣ ಇರಬಹುದು.

ಶಿರಾದಲ್ಲಿ ಟಿ.ಬಿ.ಜಯಚಂದ್ರ ಜನತೆಯ ಬದುಕು ಉಳಿಸುವ ನದಿನೀರು ಹರಿಸಿದ್ದರು. ಬಿಜೆಪಿಯವರು ಬಂದು ಅಕ್ರಮವಾಗಿ ಸಂಪಾದಿಸಿದ್ದ ಹಣದ ಹೊಳೆ ಹರಿಸಿದ್ದರು. ಇದು ಪ್ರಜಾಪ್ರಭುತ್ವಕ್ಕೆ ಮಾರಕವಾದ ಬೆಳವಣಿಗೆ. ಜನರ ಸೇವೆ ಮಾಡಿದವರನ್ನು ಜನ ಪ್ರಾಮಾಣಿಕವಾಗಿ ಗುರುತಿಸಿ ಹರಸಬೇಕು.

ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಹೀನಾಯವಾಗಿ ಸೋತಿರುವುದರಿಂದ ಆ ಪಕ್ಷದ ಮತಗಳು ಬಿಜೆಪಿ ಬುಟ್ಟಿಗೆ ಬಿದ್ದು ಅವರ ಗೆಲುವಿಗೆ ನೆರವಾಯಿತು. ಮುಖ್ಯವಾಗಿ ಶಿರಾದಲ್ಲಿ ಜೆಡಿಎಸ್ ತನ್ನ ಮತಗಳನ್ನಾದರೂ ಉಳಿಸಿಕೊಂಡಿದ್ದರೆ ಖಂಡಿತ ಬಿಜೆಪಿ ಇಷ್ಟು ಸುಲಭದಲ್ಲಿ ಗೆಲ್ಲುತ್ತಿರಲಿಲ್ಲ.” ಎಂದು ಬರೆದು ಪೋಸ್ಟ್ ಮಾಡಿದ್ದಾರೆ‌‌..