ಸಂತೋಷದ ಸುದ್ದಿ ಹಂಚಿಕೊಂಡ ವಿಜಯಲಕ್ಷ್ಮಿ ದರ್ಶನ್..

0 views

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರು ಅಭಿಮಾನಿಗಳೊಂದಿಗೆ ಸಿಹಿ ಸುದ್ದಿಯೊಂದನ್ನು ಹಂಚಿಕೊಂಡಿದ್ದಾರೆ.. ಹೌದು ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಆಕ್ಟೀವ್ ಆಗಿರುವ ವಿಜಯಲಕ್ಷ್ಮಿ ದರ್ಶನ್ ಆವರು ಆಗಾಗ ವಿನೀಶ್ ದರ್ಶನ್ ಅವರ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.. ಇದೀಗ ತಮ್ಮ ಕುರಿತಾದ ಸಂತೋಷದ ಸುದ್ದಿಯೊಂದನ್ನು ಹಂಚಿಕೊಂಡಿದ್ದಾರೆ..

ಹೌದು ಸಿನಿಮಾ ಮೂಲಕ ಮಾತ್ರವಲ್ಲದೇ ಅದರಿಂದಾಚೆಗೂ ದರ್ಶನ್ ಅವರೆಂದರೆ ಅಭಿಮಾನಿಗಳಿಗೆ ಬಾಸ್ ಎನ್ನಬಹುದು.. ಅವರ ಸರಳತೆ ಇಂದಲೇ ಜನಮನ ಗೆದ್ದಿದ್ದರೆ.. ಇತ್ತ ವಿಜಯಲಕ್ಷ್ಮಿ ದರ್ಶನ್ ಅವರೂ ಸಹ ತಮ್ಮದೇ ದಾರಿಯಲ್ಲಿ ಅನೇಕರಿಗೆ ನೆರವಾಗಿದ್ದಾರೆ.. ಕೆಲ ದಿನಗಳ ಹಿಂದಷ್ಟೇ ಹೊಸ ಉದ್ಯಮ ಆರಂಭಿಸಿದ್ದ ವಿಜಯಲಕ್ಷ್ಮಿ ದರ್ಶನ್ ಅವರು ಮೈ ಫ್ರೆಶ್ ಬ್ಯಾಸ್ಕೆಟ್ ಎಂಬ ಆನ್ಲೈನ್ ಆಪ್ ಒಂದನ್ನು ತೆರೆದು ರೈತರಿಗೆ ನೆರವಾಗಿದ್ದರು.. ಆ ಆಪ್ ಮೂಲಕ ರೈತರು ನೇರವಾಗಿ ಗ್ರಾಹಕರಿಗೆ ತಮ್ಮ ಉತ್ಪನ್ನಗಳನ್ನು ನೀಡಬಹುದಾಗಿತ್ತು.. ಗ್ರಾಹಕರಿಗೂ ರೈತರಿಂದ ನೇರವಾಗಿ ತರಕಾರಿ ಹಾಗೂ ಹಣ್ಣುಗಳು ತಲುಪುತ್ತಿದ್ದವು‌‌..

ರೈತರಿಗೆ ನೆರವಾಗುವ ಸಲುವಾಗಿ ವಿಜಯಲಕ್ಷ್ಮಿ ದರ್ಶನ್ ಅವರು ಮಾಡಿದ ಈ ಕೆಲಸಕ್ಕೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದರು.. ದರ್ಶನ್ ಅವರು ಒಂದು ರೀತಿಯಲ್ಲಿ ಕಷ್ಟದಲ್ಲಿರುವವರಿಗೆ ನೆರವಾದರೆ ವಿಜಯಲಕ್ಷ್ಮಿ ದರ್ಶನ್ ಅವರು ಮತ್ತೊಂದು ರೀತಿಯಲ್ಲಿ ನೆರವಾಗುತ್ತಿರುವುದು ಮೆಚ್ಚುವ ವಿಚಾರ.. ದರ್ಶನ್ ಅವರು ಸದ್ಯ ಪ್ರಾಣಿ ಪಕ್ಷಿಗಳ ಪ್ರೀತಿಯ ಜೊತೆಗೆ ಕೃಷಿಯ ಕಡೆಯೂ ಒಲವು ಮೂಡಿದ್ದು ಮೈಸೂರಿನ ತಮ್ಮ ಫಾರ್ಮ್ ಹೌಸ್ ನಲ್ಲಿ ಲಾಕ್ ಡೌನ್ ನಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದರು.. ವಿಜಯಲಕ್ಷ್ಮಿ ದರ್ಶನ್ ಅವರೂ ಸಹ ವಾರಾಂತ್ಯದಲ್ಲಿ‌ ಮಗನ ಜೊತೆ ಮೈಸೂರಿಗೆ ಆಗಮಿಸಿ ಪ್ರಾಣಿ ಪಕ್ಷಿಗಳ ಜೊತೆ ಮಗ ಸಮಯ ಕಳೆಯಲು ಅವಕಾಶ ಮಾಡಿಕೊಡುತ್ತಾ ಆಗಾಗ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ‌‌..

ಇದೀಗ ವಿಜಯಲಕ್ಷ್ಮಿ ದರ್ಶನ್ ಅವರು ಹೊಸದಾಗಿ ಶುರು ಮಾಡಿದ ಅವರ ಉದ್ಯಮಕ್ಕೆ ಸಂಬಂಧಪಟ್ಟಂತೆ ಇದೀಗ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಗಿದೆ.. ಹೌದು ಟೈಂಸ್ ಬ್ಯುಸಿನೆಸ್ ನವರು “ಉದಯೋನ್ಮಕ ಮಹಿಳಾ ಉದ್ಯಮಿ” ಎಂಬ ಪ್ರಶಸ್ತಿಯನ್ನು ವಿಜಯಲಕ್ಷ್ಮಿ ದರ್ಶನ್ ಅವರಿಗೆ ನೀಡಿ ಸನ್ಮಾನಿಸಿದ್ದಾರೆ.. ಈ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಫೋಟೋ ಜೊತೆಗೆ ಪೋಸ್ಟ್ ಮಾಡುವ ಮೂಲಕ ಅಭಿಮಾನಿಗಳೊಂದಿಗೆ ಸಂತೋಷ ಹಂಚಿಕೊಂಡಿದ್ದಾರೆ..